Featured, ಇತರೆ, ಸ್ಥಳೀಯ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ, ಏಪ್ರಿಲ್ 11: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರನ್ನು ಹೃದಯ ಮತ್ತು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುಗೆ ಶನಿವಾರ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, 92 ವರ್ಷದ ಗಾಯಕಿಯ ಆರೋಗ್ಯ ಸ್ಥಿತಿ ಕಳೆದ ಕೆಲವು ತಿಂಗಳುಗಳಿಂದ ತೀರಾ ಉತ್ತಮವಾಗಿರಲಿಲ್ಲ. ಇತ್ತೀಚೆಗೆ ಅವರ ಆರೋಗ್ಯದಲ್ಲಿ ತೀವ್ರ ಹದಗೆಟ್ಟ ಹಿನ್ನೆಲೆ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಅವರಿಗೆ ಹೃದಯ ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಸ್ತುತ ಅವರು ಐಸಿಯುದಲ್ಲಿ ಕಟ್ಟುನಿಟ್ಟಿನ ನಿಗಾವಳಿಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ಸಂಗೀತ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ಆಶಾ ಭೋಸ್ಲೆ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ಗಣ್ಯರು ಚಿಂತೆಯನ್ನು ವ್ಯಕ್ತಪಡಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥನೆಗಳು ನಡೆಯುತ್ತಿವೆ.
m

Related Posts