Featured, ಇತರೆ, ಸ್ಥಳೀಯ

ಸುಳ್ಯ : ಭೀಮ್ ಆರ್ಮಿ ತಾಲೂಕು ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ: ಭೀಮ್ ಆರ್ಮಿ ತಾಲೂಕು ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಸರಳ ರೀತಿಯಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಭೀಮ್ ಆರ್ಮಿ ಜಿಲ್ಲಾ ಉಪಾಧ್ಯಕ್ಷ ಉಮ್ಮರ್ ಕೆ.ಎಸ್ ಅವರು, ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಫಲವಾಗಿ ದೇಶದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದರು. ಯುವಕರು ಭೀಮ್ ಆರ್ಮಿಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸದಸ್ಯರಾದ ಕೊರಗಪ್ಪ ಕೊಯಿಲ, ತಾಲೂಕು ಪ್ರಧಾನ ಕಾರ್ಯದರ್ಶಿ ಪದ್ಮಯ್ಯ ಐವ ರನಾಡು, ಭೀಮ್ ಆರ್ಮಿ ಖಜಾಂಚಿ ಇಕ್ಬಾಲ್ ಸುಣ್ಣಮೂಲೆ, ತಾಲೂಕು ಸಂಘಟನಾ ಕಾರ್ಯದರ್ಶಿ ರಶೀದ್ ಜಟ್ಟಿಪಳ್ಳ ಹಾಗೂ ಸದಸ್ಯರಾದ ದರ್ಶನ್ ಉಪಸ್ಥಿತರಿದ್ದರು
m

Related Posts