Featured, ಅಂಕಣ, ಸ್ಥಳೀಯ

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

ಬೆಳ್ತಂಗಡಿ (ಎ-14):ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ ಜನ್ಮದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳ ರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಚಿಂತಕರು ಹಾಗೂ ಅಂಬೇಡ್ಕರ್ ವಾದಿ ದಾಮೋದರ್ ಬೆಳ್ತಂಗಡಿ ಸಾಮಾಜಿಕ ಅಸಮಾನತೆ, ಅನ್ಯಾಯ ಮತ್ತು ಶೋಷಣೆ ವಿರುದ್ಧ ಧ್ವನಿ ಎತ್ತುವ ಅಗತ್ಯತೆಯನ್ನು ಒತ್ತಿಹೇಳಿದರು. ದೇಶದ ಸಂವಿಧಾನ ನೀಡಿರುವ ಹಕ್ಕುಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಹಾಗೂ ಸಮಾಜದಲ್ಲಿ ನ್ಯಾಯ ಸ್ಥಾಪನೆಗಾಗಿ ಯುವಕರು ಮುನ್ನಡೆ ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷರು ಅಕ್ಬರ್ ಬೆಳ್ತಂಗಡಿ, ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ ಜಿಕೆ ಹಾಗೂ ಪಕ್ಷದ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯದರ್ಶಿ ರಶೀದ್ ಸ್ವಾಗತಿಸಿ, ಅಶ್ರಫ್ ಕಟ್ಟೆ ವಂದಿಸಿದರು. ಕಾರ್ಯಕ್ರಮವನ್ನು ನಿಝಾಮ್ ಕಟ್ಟೆ ನಿರೂಪಿಸಿದರು.

m

Related Posts