Featured, ಇತರೆ, ಸ್ಥಳೀಯ

ಅರಂಬೂರು ಪಾಲಡ್ಕ: ಪಿಕಪ್ ಮತ್ತು ಕಾರಿನ ನಡುವೆ ಅಪಘಾತ

ಸುಳ್ಯ: ತಾಲೂಕಿನ ಅರಂಬೂರು ಪಾಲಡ್ಕ ಸಮೀಪ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪಿಕಪ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ವರದಿಯಾಗಿದೆ.
ಮಡಿಕೇರಿ ಕಡೆಯಿಂದ ಬರುತ್ತಿದ್ದ ಕಾರು ಮತ್ತು ಸುಳ್ಯದಿಂದ ಅರಂತೋಡಿಗೆ ತೆರಳುತ್ತಿದ್ದ ಪಿಕಪ್ ವಾಹನ ಅರಂಬೂರು ಪಾಲಡ್ಕ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ರಸ್ತೆ ಮೇಲೆಯೇ ಪಲ್ಟಿಯಾಗಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಪಿಕಪ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಹಾಗೂ ನೆರವು ಸಿಬ್ಬಂದಿಗಳ ಸಹಾಯದಿಂದ ಗಾಯಾಳುಗಳನ್ನು ಸುಳ್ಯದ ಶಿವ ಆಂಬುಲೆನ್ಸ್ ಮೂಲಕ ಕರೆತಂದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
m

Related Posts