Featured, ಇತರೆ, ಸ್ಥಳೀಯ

ಎಪ್ರಿಲ್ 18ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ: ಹಲವು ಫೀಡರ್‌ಗಳಲ್ಲಿ ನಿರ್ವಹಣಾ ಕೆಲಸ

ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಸರಬರಾಜು ಸ್ಥಗಿತ

 

ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಹಲವು 11 ಕೆ.ವಿ. ಫೀಡರ್‌ಗಳಲ್ಲಿ ಏಪ್ರಿಲ್ 18 ಶನಿವಾರ ನಿರ್ವಹಣಾ ಕೆಲಸ ನಡೆಯಲಿದೆ.

ಈ ಹಿನ್ನೆಲೆಯಲ್ಲಿ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
m

Related Posts