Featured, ಸ್ಥಳೀಯ

ಸುಳ್ಯ : ಮಾವಿನಕಟ್ಟೆ ತಿರುವಿನಲ್ಲಿ ಬೊಲೆರೋ ಪಲ್ಟಿ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸುಳ್ಯ, ಏಪ್ರಿಲ್ 17:
ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಮಾವಿನಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬೊಲೆರೋ ವಾಹನವೊಂದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವರದಿಯಾಗಿದೆ.
ಉಪ್ಪಿನಂಗಡಿ ಮೂಲದ ವಾಹನ ಇದಾಗಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದ್ದು, ಅಪಘಾತದ ಪರಿಣಾಮ ವಾಹನದಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.
m

Related Posts