ನೆಟ್ಟಾರು, ಏಪ್ರಿಲ್ 20 : ಸಮಾಜ ಸೇವೆಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಏಪ್ರಿಲ್ 26, 2026ರಂದು ನೆಟ್ಟಾರಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಅಲ್ ಅಮಾನ್ ಸಮಿತಿ, ನೆಟ್ಟಾರು ಹಾಗೂ ರಫಾ ಫೌಂಡೇಶನ್ ಸಹಯೋಗದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು (R) ವತಿಯಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರವು ಬೆಳಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ.
“ಒಂದು ರಕ್ತದಾನವು ಮೂವರು ಜೀವಗಳನ್ನು ಉಳಿಸಬಲ್ಲದು” ಎಂಬ ಸಂದೇಶದೊಂದಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಕೊರತೆಯನ್ನು ನಿವಾರಿಸಲು ಇಂತಹ ಕಾರ್ಯಕ್ರಮಗಳು ಅಗತ್ಯವೆಂದು ಆಯೋಜಕರು ತಿಳಿಸಿದ್ದಾರೆ.
18 ವರ್ಷ ಮೇಲ್ಪಟ್ಟ ಆರೋಗ್ಯವಂತರು ಈ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಬಹುದು. ರಕ್ತದಾನಕ್ಕೆ ಬರುವವರು ಮೊದಲು ಸಮರ್ಪಕ ಆಹಾರ ಸೇವಿಸಿ, ಆರೋಗ್ಯದ ದೃಷ್ಟಿಯಿಂದ ಸಿದ್ಧರಾಗಿರಬೇಕು ಎಂದು ಸೂಚಿಸಲಾಗಿದೆ.
ಶಿಬಿರದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: 📞 9611817825, 8105147360, 9902137255, 9632870947
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.






m
