551 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದ ಫಾತಿಮತ್ ಮುಫೀದ
ಕಬಕ, ಏಪ್ರಿಲ್ 23:
ಕಬಕ ಸರಕಾರಿ ಪ್ರೌಡ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಫಾತಿಮತ್ ಮುಫೀದ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 551 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಫಾತಿಮತ್ ಮುಫೀದ ಅವರು ಕಬಕದ ಅಬ್ದುಲ್ ಹಮೀದ್ (ಮೌಲಾ ಅಮ್ಮಿ) ಮತ್ತು ಫಾತಿಮತ್ ಝುಹ್ರಾ ದಂಪತಿಗಳ ಪುತ್ರಿಯಾಗಿದ್ದಾರೆ. ಸರಕಾರಿ ಶಾಲೆಯಲ್ಲಿ ಕಲಿತು ಉತ್ತಮ ಸಾಧನೆ ತೋರಿದ ಇವರಿಗೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.
ಸರಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬುದಕ್ಕೆ ಮುಫೀದ ಅವರ ಸಾಧನೆ ಉತ್ತಮ ಉದಾಹರಣೆಯಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗಿದೆ. ಪರಿಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪ ಇದ್ದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಯಶಸ್ಸು ಸಾಧ್ಯ ಎಂಬುದನ್ನು ಇವರ ಸಾಧನೆ ತೋರಿಸಿದೆ.
ಇಂತಹ ಸಾಧನೆಗಳು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶಗಳ ನಿರೀಕ್ಷೆಯನ್ನು ಮೂಡಿಸಿದೆ





m
