ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ದುರ್ಘಟನೆ ವರದಿಯಾಗಿದೆ.
ಮೃತ ಶಿಕ್ಷಕಿಯನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಮುನ್ನ ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿದ ಸಂಗತಿ ಸ್ಥಳೀಯರಲ್ಲಿ ದುಃಖದ ವಾತಾವರಣವನ್ನು ಮೂಡಿಸಿದೆ.
ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


