Featured, ಇತರೆ, ಸ್ಥಳೀಯ

ಕೇರಳದಲ್ಲಿ UDF ಅಧಿಕಾರಕ್ಕೆ: ಹರ್ಷ ವ್ಯಕ್ತಪಡಿಸಿದ ಸುಳ್ಯ AIKMCC

ಸುಳ್ಯ, ಮೇ 4: ಕೇರಳದಲ್ಲಿ ದಶಕದ ಬಳಿಕ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಮತ್ತೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಲ್ ಇಂಡಿಯಾ ಕೆಎಂಸಿಸಿ (AIKMCC) ಸಮಿತಿ ಸಂತೋಷ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ನೀಡಿದ ಸಮಿತಿಯ ಪದಾಧಿಕಾರಿಗಳು, UDF ಅಂಗಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (Indian Union Muslim League) ಈ ಬಾರಿ ಚುನಾವಣೆಯಲ್ಲಿ ಮಹತ್ತರ ಸಾಧನೆ ಮಾಡಿರುವುದಾಗಿ ತಿಳಿಸಿದ್ದಾರೆ. ಪಕ್ಷವು ಸ್ಪರ್ಧಿಸಿದ್ದ 27 ಕ್ಷೇತ್ರಗಳಲ್ಲಿ ಬಹುತೇಕ ಸ್ಥಾನಗಳಲ್ಲಿ ಜಯಗಳಿಸಿರುವುದು ಗಮನಾರ್ಹ ಸಾಧನೆಯಾಗಿದ್ದು, ಸರ್ಕಾರ ರಚನೆಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪ್ರಮುಖ ಪಾತ್ರವಹಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ 10 ವರ್ಷಗಳಿಂದ ಅಧಿಕಾರದಿಂದ ದೂರವಿದ್ದ UDF ಈಗ ಮತ್ತೆ ಜನಾಭಿಮಾನದಿಂದ ಅಧಿಕಾರಕ್ಕೆ ಮರಳುತ್ತಿರುವುದು ಕೇರಳದ ರಾಜಕೀಯದಲ್ಲಿ ಮಹತ್ವದ ತಿರುವಾಗಿದೆ. ಈ ಫಲಿತಾಂಶವು ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಸಮಿತಿ ಹೇಳಿದೆ.
ಇದೇ ವೇಳೆ, ಮುಂದಿನ ದಿನಗಳಲ್ಲಿ ಜನಪರ ಆಡಳಿತವನ್ನು ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡುವ ವಿಶ್ವಾಸವನ್ನು AIKMCC ವ್ಯಕ್ತಪಡಿಸಿದೆ

m

Related Posts