ಮಡಿಕೇರಿ : ಬೆಂಗಳೂರಿನಿಂದ ಸುಳ್ಯಕ್ಕೆ ಆಗಮಿಸುತ್ತಿದ್ದ ಖಾಸಗಿ ಪೂರ್ಣಿಮಾ ಬಸ್‌ನ ಚಾಲಕನಿಗೆ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ, ಬಸ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಬರೆಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಮಡಿಕೇರಿ ಸಮೀಪದ ತಾಳತಮನೆ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಘಟನೆಯ ವೇಳೆ ಬಸ್‌ನಲ್ಲಿ ಪ್ರಯಾಣಿಕರು ಇದ್ದರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹೃದಯಾಘಾತಕ್ಕೊಳಗಾದ ಚಾಲಕನ ಸ್ಥಿತಿ ತುಸು ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.





m
