Featured, ಅಂಕಣ, ಸ್ಥಳೀಯ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಯ ಸಾವಾಗಿರುವುದು ಅತ್ಯಂತ ಖಂಡನೀಯ: SDPI

ಬೆಳ್ತಂಗಡಿ (ಮೇ -11): ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಯ ಸಾವಾಗಿರುವುದು ಅತ್ಯಂತ ದುಃಖಕರ ಮತ್ತು ಖಂಡನೀಯ ಘಟನೆ ಎಂದು SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಚುತ್ತ (42) ಅವರು ಆಸ್ಪತ್ರೆಯ ಹಿಂಭಾಗದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಆಸ್ಪತ್ರೆಯ ಆಡಳಿತದ ಗಂಭೀರ ವೈಫಲ್ಯವನ್ನು ತೋರಿಸುತ್ತದೆ. ಚಿಕಿತ್ಸೆಯಲ್ಲಿದ್ದ ರೋಗಿಯೊಬ್ಬರು ಆಸ್ಪತ್ರೆಯಿಂದ ಹೊರ ಹೋಗುವಷ್ಟು ನಿರ್ಲಕ್ಷ್ಯ ಹೇಗೆ ನಡೆದಿದೆ ಎಂಬುದು ಗಂಭೀರ ಪ್ರಶ್ನೆಯಾಗಿದೆ.

ಆಸ್ಪತ್ರೆಯ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದರೆ ಇಂದು ಒಂದು ಬಡ ಕುಟುಂಬದ ಆಧಾರಸ್ತಂಭ ಜೀವ ಕಳೆದುಕೊಳ್ಳಬೇಕಾಗಿರಲಿಲ್ಲ. 

ಈ ಘಟನೆಯ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ಕರ್ತವ್ಯ ಲೋಪ ಎಸಗಿದ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇಂತಹ ನಿರ್ಲಕ್ಷ್ಯಗಳು ಮರುಕಳಿಸದಂತೆ ಆಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ತಕ್ಷಣ ಸರಿಪಡಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

m

Related Posts