ಸಂಪಾಜೆ ಭಾಗಕ್ಕೆ ಆಗಮಿಸಿದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಅನಿರೀಕ್ಷಿತವಾಗಿ ಸಂಪಾಜೆ ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಕೈಕೊಂಡರು.
ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ವಿವಿಧ ಮಾಹಿತಿಯನ್ನು ಕೇಳಿ ತಿಳಿದುಕೊಂಡ ಮಾನ್ಯ ಶಾಸಕರು, ಲಭ್ಯ ಇರುವ ಔಷಧಿ, ರೋಗಿಗಳಿಗೆ ಇರುವ ಸೌಲತ್ತುಗಳನ್ನು ಮತ್ತು ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನು ತರಿಸಿಕೊಂಡು ಪರಿಶೀಲಿಸಿದರು.

ಆರೋಗ್ಯ ಕೇಂದ್ರದ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾನ್ಯ ಶಾಸಕರು, ಯಾವುದಾದರೂ ಕೊರತೆ ಇದ್ದಲ್ಲಿ ನೇರವಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಅಥವಾ ತನ್ನನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಸೂಚಿಸಿದರು. ಬಡ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಚಿಕಿತ್ಸೆ ನೀಡಲು ಸೂಚಿಸಿದ ಮಾನ್ಯ ಶಾಸಕರು, ಮುಂದಿನ ದಿನಗಳಲ್ಲಿ ಸದ್ರಿ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 24 ತಾಸು ಕಾರ್ಯನಿರ್ವಹಿಸುವಂತೆ ಮಾಡಲು, ಸರ್ಕಾರ ಮಟ್ಟದಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರು ಸೂರಜ್ ಹೊಸೂರು, ವಲಯ ಅಧ್ಯಕ್ಷರು ವಿಜಯ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಪಿ ಎಲ್ ಸುರೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸದಸ್ಯರು ರಾಜೇಶ್ವರಿ, ವಿದ್ಯಾ ಸಾಗರ್, ಹನೀಫ್, ರೀತಿನ್, ಸಂತೋಷ್, ರವಿ ರಾಜ್ ಹೊಸೂರ್, ಪದ್ಮನಾಭ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.





m
