ಇತರೆ, ಸ್ಥಳೀಯ

SDPI ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ

ಸುಳ್ಯ:ಮೇ.31- SDPI ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಸುಳ್ಯದ ಮಾಂತೂರಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಮಿರಾಝ್ ಸುಳ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ SDPI ರಾಜ್ಯ ಸಮಿತಿ ಕಾರ್ಯದರ್ಶಿ ರಿಯಾಝ್ ಕಡಂಬುರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. SDPI ಮಂಗಳೂರು ನಗರ ಜಿಲ್ಲಾ ಕಾರ್ಯಾಧ್ಯಕ್ಷರಾದ ಅಶ್ರಫ್ ಅಡ್ಡೂರು ರವರು ಪ್ರಸಕ್ತ ರಾಜಕೀಯದ ಬಗ್ಗೆ ವಿವರಣೆ ನೀಡಿದರು. ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಸಮಾರೋಪ ಭಾಷಣ ಮಾಡಿದರು. SDPI ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಬಾಬು ಸವಣೂರು ಸಮಿತಿ ಸದಸ್ಯರಾದ ರಝಕ್ ಕೆನರಾ, ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ರಫೀಕ್ ಎಂ.ಎ ರವರು ಉಪಸ್ಥಿತರಿದ್ದರು. ಶರೀಫ್ ನಿಂತಿಕಲ್ಲು ಸ್ವಾಗತ ಭಾಷಣವನ್ನು ಮಾಡಿದರು. ರಫೀಕ್ ಎಂ.ಎ ಧನ್ಯವಾದ ಮಾಡಿದರು. ರಫೀಕ್ ಎಂ.ಎಸ್ ಸವಣೂರು ಕಾರ್ಯಕ್ರಮ ನಿರೂಪಣೆ ಮಾಡಿದರು.
m

Related Posts