ಈ ಭೇಟಿಯು ಸುಳ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ರಾಜ್ಯ ನಾಯಕತ್ವದ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಬೆಂಗಳೂರು, ಜೂನ್ 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಹಾಗೂ ಪ್ರಮುಖ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಭೇಟಿಯಾಗಿ ಶುಭ ಹಾರೈಸಿದರು.
ಕೆಪಿಸಿಸಿ ನೂತನ ಸಾರಥಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಪಕ್ಷದ ತತ್ವಗಳು ಹಾಗೂ ಕಾರ್ಯಕ್ರಮಗಳನ್ನು ಜನಸಾಮಾನ್ಯರ ನಡುವೆ ತಲುಪಿಸುವ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ.ಶಾಹೀದ್ ತೆಕ್ಕಿಲ್ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರ (SUDA) ಅಧ್ಯಕ್ಷ ಕೆ. ಎಂ. ಮುಸ್ತಫಾ ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಶುಭಾಶಯಗಳನ್ನು ಸಲ್ಲಿಸಿದ ನಾಯಕರು, ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಹಾರೈಸಿದರು. ಈ ಭೇಟಿಯು ಸುಳ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ರಾಜ್ಯ ನಾಯಕತ್ವದ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.





m

