ಸುಳ್ಯ, ಜೂ. 9: ಪೈಂಬಚಾಲ್ ಸಮೀಪದ ತೋಟಕೊಚ್ಚಿ ಪ್ರದೇಶದಲ್ಲಿ ವಿದ್ಯುತ್ ಕಂಬಕ್ಕೆ ಮರ ಬಿದ್ದ ಪರಿಣಾಮ ಲೈನ್ ಹಾಫ್ ಮಾಡಲು ಹೋಗುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಪೈಂಬಚಾಲ್ ತೋಟಕೊಚ್ಚಿ ನಿವಾಸಿ ಮಹಮ್ಮದ್ ಶರೀಫ್ (35) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ವಿದ್ಯುತ್ ಕಂಬಕ್ಕೆ ಮರ ಬಿದ್ದ ಕಾರಣ ಲೈನ್ ಹಾಫ್ ಮಾಡಲು ಹೋಗುವ ಸಂದರ್ಭದ ವೇಳೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಗಂಭೀರವಾಗಿ ಗಾಯಗೊಂಡ ಮಹಮ್ಮದ್ ಶರೀಫ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.





m
