Featured, ಇತರೆ, ಸ್ಥಳೀಯ

ಮೋದಿ 4399 ದಿನಗಳ ಐತಿಹಾಸಿಕ ಸಾಧನೆ: ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ, ಆಯುಷ್ಯ ಹಾಗೂ ದೇಶದ ಪ್ರಗತಿಗಾಗಿ ವಿಶೇಷ ಪ್ರಾರ್ಥನೆ – ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮುಖಂಡರ ಉಪಸ್ಥಿತಿ

ಸುಳ್ಯ, ಜೂ. 10: ಭಾರತದ ಪ್ರಧಾನಮಂತ್ರಿಯಾಗಿ ಸತತ 4399 ದಿನಗಳ ಕಾಲ ದೇಶಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಪೆರುವಾಜೆ ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4398 ದಿನಗಳ ಆಡಳಿತದ ದಾಖಲೆಯನ್ನು ಹಿಂದಿಕ್ಕಿ, ದೇಶದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಗೆ ನಿರಂತರವಾಗಿ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾದ ನರೇಂದ್ರ ಮೋದಿ ಅವರ ಈ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶವನ್ನು ಮತ್ತಷ್ಟು ಅಭಿವೃದ್ಧಿ ಮತ್ತು ಪ್ರಗತಿಯತ್ತ ಕೊಂಡೊಯ್ಯುವ ಶಕ್ತಿ ಅವರಿಗೆ ಲಭಿಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಜಲದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ ಮತ್ತು ಮಹಾಮಂಗಳಾರತಿಯನ್ನು ನೆರವೇರಿಸಿ ದೇಶದ ಒಳಿತಿಗಾಗಿ ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಕಾರ್ಯದರ್ಶಿ ಪುಷ್ಪ ಮೇದಪ್ಪ, ಬೆಳ್ಳಾರೆ ಮಹಾಶಕ್ತಿ ಕೇಂದ್ರ ಪ್ರಮುಖ ಅಜಿತ್ ಕಿಲ್ಲಂಗೋಡಿ, ಕಾರ್ಯದರ್ಶಿ ಶಿವಪ್ರಸಾದ್ ನಡುತೋಟ, ಚಂದ್ರಶೇಖರ ಪನ್ನೆ, ಯುವ ಮೋರ್ಚಾ ಸದಸ್ಯ ಹರ್ಷಿತ್ ಪೆರುವಾಜೆ, ಪದ್ಮನಾಭ ಶೆಟ್ಟಿ ಪೆರುವಾಜೆ, ಕುಶಾಲಪ್ಪ ಮುಕ್ಕೂರು, ರಮೇಶ್, ವಿಜಯ್, ವೆಂಕಟಕೃಷ್ಣ ರಾವ್, ಪೂರ್ಣಿಮ, ಪದ್ಮನಾಭ ಕಲಾಸುಮ, ಪ್ರಸಾದ್ ಕಾಟೂರು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.
m

Related Posts