17 ಜಿಲ್ಲೆಗಳಲ್ಲಿ ಮೃತರು, ತೆರಿಗೆ ಪಾವತಿದಾರರ ಹೆಸರಿನ ಫಲಾನುಭವಿಗಳನ್ನು ಪತ್ತೆಹಚ್ಚಿದ ಸರ್ಕಾರ
ಬೆಂಗಳೂರು, ಜೂ. 11: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ರಾಜ್ಯಾದ್ಯಂತ ವೇಗ ನೀಡಲಾಗಿದ್ದು, 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ಈವರೆಗೆ 1,12,092 ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಪರಿಶೀಲನಾ ಕಾರ್ಯದ ವೇಳೆ 55,232 ಮೃತ ಮಹಿಳೆಯರ ಹೆಸರಿನಲ್ಲಿಯೇ ಗೃಹಲಕ್ಷ್ಮಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಇದೇ ವೇಳೆ 56,860 ಆದಾಯ ತೆರಿಗೆ (ಐಟಿ) ಹಾಗೂ ಜಿಎಸ್‌ಟಿ ಪಾವತಿಸುವ ಮಹಿಳೆಯರು ಕೂಡ ಯೋಜನೆಯ ಫಲಾನುಭವಿಗಳಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನರ್ಹರ ಹೆಸರನ್ನು ಯೋಜನೆಯ ಪಟ್ಟಿಯಿಂದ ತೆಗೆದುಹಾಕುವ ಕ್ರಮ ಕೈಗೊಂಡಿದೆ.
ಜಿಲ್ಲಾವಾರು ಪರಿಶೀಲನೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅತಿ ಹೆಚ್ಚು 18,000, ಕಲಬುರಗಿಯಲ್ಲಿ 12,719, ಚಿತ್ರದುರ್ಗದಲ್ಲಿ 12,637, ದಕ್ಷಿಣ ಕನ್ನಡದಲ್ಲಿ 9,000, ಶಿವಮೊಗ್ಗದಲ್ಲಿ 8,114, ಕೊಪ್ಪಳದಲ್ಲಿ 7,200, ಉತ್ತರ ಕನ್ನಡದಲ್ಲಿ 6,380, ಹಾವೇರಿಯಲ್ಲಿ 6,346 ಸೇರಿದಂತೆ ಸಾವಿರಾರು ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ.
ಬಯೋಮೆಟ್ರಿಕ್ ವ್ಯವಸ್ಥೆ ಜಾರಿ ಸಾಧ್ಯತೆ
ಗೃಹಲಕ್ಷ್ಮಿ ಯೋಜನೆಯಲ್ಲಿ ದುರ್ಬಳಕೆ ತಡೆಯುವ ಉದ್ದೇಶದಿಂದ ಮುಂದಿನ ವಾರದಿಂದ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಫಲಾನುಭವಿಗಳ ಮೊಬೈಲ್ ಸಂಖ್ಯೆ ಬದಲಾಗಿರುವುದು, ಮೃತರ ಖಾತೆಗಳಿಗೆ ಹಣ ಜಮೆಯಾಗಿರುವುದು ಸೇರಿದಂತೆ ಹಲವು ಅಕ್ರಮಗಳ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಗ್ಯಾರಂಟಿ ದುರ್ಬಳಕೆ ಆರೋಪಗಳ ಪರಿಶೀಲನೆ: ಸಿಎಂ
ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾ ಗುತ್ತಿದ್ದು, ಮೃತರ ಹೆಸರಿನಲ್ಲೂ ‘ಗೃಹಲಕ್ಷ್ಮಿ’ ಹಣ ಪಾವತಿಯಾ ಗುತ್ತಿದೆ, ಅಂಗಡಿಗೂ ಉಚಿತ ವಿದ್ಯುತ್ ಬಳಕೆಯಾಗುತ್ತಿದ್ದು, ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದೆ, ಪೋನ್ ನಂಬರ್ ನಾ ಬದಲಿದ್ದು, ಫಲಾನುಭವಿಗಳ ಹಣ ಇನ್ಯಾರಿಗೋ ತಲುಪುತ್ತಿದೆ ఎంబ ಆರೋಪವಿದೆ, ಅದನ್ನು ಪರಿಶೀಲನೆ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಮತದಾರರಿಗೆ ನಮ್ಮ ಗ್ಯಾರಂಟಿಗಳಿಂದ ಅನುಕೂಲವಾಗಬೇಕು. ಸರಿಯಾದ ಫಲಾ ನುಭವಿಗೆ ನಮ್ಮ ಗ್ಯಾರಂಟಿ ಯೋಜನೆಯ ಲಾಭವನ್ನು ತಲುಪಬೇಕು ಎಂಬ ನಮ್ಮ ಉದ್ದೇಶ’ ಎಂದರು. ಗೃಹಲಕ್ಷ್ಮಿ ಕಂತು ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿ, ‘ಈ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.





m
