ಸುಳ್ಯ, ಜೂ. 12: ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುಳ್ಯದ ಖ್ಯಾತ ತೆರಿಗೆ ಸಲಹೆಗಾರ ಸುಬ್ರಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಬಳಿಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಕೆವಿಜಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿದಿದ್ದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಬ್ರಮಣ್ಯ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು, ಸ್ನೇಹಿತರು, ಹಿತೈಷಿಗಳು ಹಾಗೂ ಸಾರ್ವಜನಿಕರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ.





m
