ಬಿಎಲ್ಎಗಳು, ನಾಮನಿರ್ದೇಶಿತ ಸದಸ್ಯರು ಹಾಗೂ ಪಕ್ಷದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ಚರ್ಚೆ

ಬೆಳ್ಳಾರೆ, ಜೂ.15: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬಿಎಲ್ಎಗಳು, ನಾಮನಿರ್ದೇಶಿತ ಸದಸ್ಯರು ಹಾಗೂ ಪಕ್ಷದ ಪ್ರಮುಖ ನಾಯಕರ ಸಭೆಯು ಬೆಳ್ಳಾರೆಯ ನಮ್ರತಾ ಕಲಾ ಮಂದಿರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ಸಭೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಶೀಲನೆ ಹಾಗೂ ಪರಿಷ್ಕರಣೆ ಕುರಿತು ಎಂ.ಜಿ. ಶಶಿಧರ್ ಮತ್ತು ಚೇತನ್ ಕಚೇಗದ್ದೆ ಅವರು ವಿವರವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಉಪಾಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು, ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ರಾಜ್ ಶೆಟ್ಟಿ ಹಾಗೂ ಹಮೀದ್ ಎಚ್.ಎಂ., ಕಾರ್ಯದರ್ಶಿ ಪ್ರಶಾಂತ ರೈ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ಸ್ವಾಗತಿಸಿದರು. ಆಡಳಿತ ವಿಭಾಗದ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ ಕಲ್ಮಡ್ಕ ವಂದಿಸಿದರು. ಬಶೀರ್ ನೇಲ್ಯಮಜಲು ಕಾರ್ಯಕ್ರಮ ನಿರೂಪಿಸಿದರು.





m
