Featured, ಇತರೆ, ಸ್ಥಳೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಭಾರತದಲ್ಲಿ ಟೆಲಿಗ್ರಾಂಗೆ ತಾತ್ಕಾಲಿಕ ನಿರ್ಬಂಧ?

ನವದೆಹಲಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆದಲ್ಲಿ ಭಾರತದಲ್ಲಿ ಟೆಲಿಗ್ರಾಂ (Telegram) ಆಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಟೆಲಿಗ್ರಾಂನ ವಿವಿಧ ಗ್ರೂಪ್‌ಗಳು ಹಾಗೂ ಚಾನಲ್‌ಗಳ ಮೂಲಕ ಹಂಚಿಕೊಳ್ಳಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಮಾಹಿತಿಯ ಪ್ರಕಾರ, ಜೂನ್ 21ರಂದು ನಡೆಯಲಿರುವ ಮರು ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಜೂನ್ 22ರವರೆಗೆ ಟೆಲಿಗ್ರಾಂ ಸೇವೆಗಳನ್ನು ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದರ ಜೊತೆಗೆ, ಟೆಲಿಗ್ರಾಂನಲ್ಲಿ ಈಗಾಗಲೇ ಕಳುಹಿಸಲಾದ ಸಂದೇಶಗಳನ್ನು ಬದಲಾಯಿಸುವ ‘ಎಡಿಟ್’ (Edit) ಆಯ್ಕೆಯ ಮೇಲೆಯೂ ಜೂನ್ 30ರವರೆಗೆ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ನೀಟ್ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಕೇಂದ್ರ ಸರ್ಕಾರ ಅಥವಾ ಟೆಲಿಗ್ರಾಂ ಸಂಸ್ಥೆಯಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬರಬೇಕಿದೆ.

m

Related Posts