ಇತರೆ, ಸ್ಥಳೀಯ

ಸುಳ್ಯ ಪೈಚಾರ್ : ಅಸ್ತ್ರ ಸ್ಪೋರ್ಟ್ಸ್ ಕ್ಲಬ್‌ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಶಿಕ್ಷಣಕ್ಕೆ ಉತ್ತೇಜನ: ಮನೆ ಮನೆಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ

ಪೈಚಾರ್, ಜೂ.18: ಹಲವಾರು ವರ್ಷಗಳಿಂದ ಸುಳ್ಯ ತಾಲೂಕಿನಾದ್ಯಂತ ಸಮಾಜಮುಖಿ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಂಘಟನೆಯ ಪದಾಧಿಕಾರಿಗಳು ಪ್ರತಿಭಾವಂತ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಫಾತಿಮತ್ ಶಹಲಾ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಅಲ್ಲದೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್‌ ಪಡೆದ ಶರವ್ಯ, ದಿಯಾ ಬಶೀರ್, ಜಾಸಿಮ್, ಇಮ್ನಾ ಫಾತಿಮ, ಆಯಿಶತ್ ಅಝ್ಮೀನ, ಆಯಿಶತ್ ಶೈಮಾ, ಶಮ್ನಾ ಸೇರಿದಂತೆ ಹಲವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವಾಧ್ಯಕ್ಷ ಶಾಫಿ ಪ್ರಗತಿ, ಅಧ್ಯಕ್ಷ ರಿಫಾಯಿ ಎಸ್.ಎ., ಪ್ರಧಾನ ಕಾರ್ಯದರ್ಶಿ ನಾಸಿರ್ ಕೆ.ಪಿ., ಜೊತೆ ಕಾರ್ಯದರ್ಶಿ ಝುಭೈರ್ ಶಾಂತಿನಗರ, ಸದಸ್ಯರಾದ ನಝೀರ್ ಶಾಂತಿನಗರ, ಮುಜೀಬ್ ಆರ್ತಾಜೆ, ಬಶೀರ್ ಕೆ.ಪಿ., ಅಶ್ರಫ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಅಸ್ತ್ರ ಸ್ಪೋರ್ಟ್ಸ್ ಕ್ಲಬ್‌ನ ಸಮಾಜಮುಖಿ ಹಾಗೂ ಶೈಕ್ಷಣಿಕ ಕಾರ್ಯವ್ಯಾಪ್ತಿಯನ್ನು ಪೋಷಕರು ಮತ್ತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಜೀಬ್ ಸ್ವಾಗತಿಸಿ, ನಾಸಿರ್ ಕೆ.ಪಿ. ವಂದಿಸಿದರು.

m

Related Posts