Featured, ಇತರೆ, ಸ್ಥಳೀಯ

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಅವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ

 

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾಗಿ ಚುನಾಯಿತರಾದ ಬಿ.ಕೆ. ಹರಿಪ್ರಸಾದ್ ಅವರಿಗೆ, ಜೊತೆಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾಗಿ ಆಯ್ಕೆಯಾಗಿರುವ ಪಿ.ವಿ. ಮೋಹನ್ ಅವರಿಗೆ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಕೆ.ಪಿ. ಜಾನಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎ.ಕೆ. ಇಬ್ರಾಹಿಂ ಅವರು ನೂತನವಾಗಿ ಆಯ್ಕೆಯಾದ ನಾಯಕರನ್ನು ಸನ್ಮಾನಿಸಿ ಶುಭ ಹಾರೈಸಿದರು.

ರಾಜ್ಯದ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರ ನಾಯಕತ್ವ ಯಶಸ್ವಿಯಾಗಲಿ ಎಂದು ಮುಖಂಡರು ಈ ವೇಳೆ ಆಶಯ ವ್ಯಕ್ತಪಡಿಸಿದರು

m

Related Posts