Featured, ಇತರೆ, ಸ್ಥಳೀಯ

ಅರಂತೋಡು, ಜೂ. 21: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮ ಹಾಗೂ ಶಿಸ್ತುಬದ್ಧವಾಗಿ ಆಚರಿಸಲಾಯಿತು.

ಅರಂತೋಡು, ಜೂ. 21: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮ ಹಾಗೂ ಶಿಸ್ತುಬದ್ಧವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ಎ.ಸಿ. ವಸಂತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಭೌತಶಾಸ್ತ್ರ ಉಪನ್ಯಾಸಕರು ಹಾಗೂ ಯೋಗಪಟುವಾದ ಸುರೇಶ್ ವಾಗ್ಲೆ ಅವರ ನೇತೃತ್ವದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಅವುಗಳ ಆರೋಗ್ಯಕಾರಿ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ವಿವರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಸೋಮಶೇಖರ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಮೇಶ್ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರಾದ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ 500ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

m

Related Posts