ಸುಳ್ಯ ಜೂನ್ 21:ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ 18ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡೋತ್ಸವವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ ಎ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಪಿ. ಅಬೂಬಕರ್ ಅವರು ಆಗಮಿಸಿ ಹೂವಿನ ಗಿಡಕ್ಕೆ ನೀರುಣಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ ಭಾಗವಹಿಸಿ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯ ಮಹತ್ವ ಹಾಗೂ ಕ್ರೀಡೋತ್ಸವದ ಉದ್ದೇಶಗಳ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ, ಬ್ಲಾಕ್ ಕಾರ್ಯದರ್ಶಿ ಸುಹೈಲ್ ಸುಳ್ಯ, ಕ್ರೀಡೋತ್ಸವದ ಉಸ್ತುವಾರಿ ಅಜೀಜ್ ಸಂಗಮ್, ಅದ್ದುಚ್ಚ ಅಡ್ಕಾರ್ ಹಾಗೂ ನಾವೂರು ಬ್ರಾಂಚ್ ಅಧ್ಯಕ್ಷ ಅಜೀಜ್ ಕಚ್ಚು ಉಪಸ್ಥಿತರಿದ್ದರು.
ಕ್ರೀಡೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರು ಹಾಗೂ ಭಾಗವಹಿಸಿದ ಎಲ್ಲಾ ಪುಟಾಣಿ ಮಕ್ಕಳಿಗೆ ಮತ್ತು ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಸುಹೈಲ್ ಸುಳ್ಯ ಸ್ವಾಗತಿಸಿದರು. ಮುನೀರ್ ಶೈನ್ ನಿರೂಪಿಸಿದ್ದು, ಫಾರೂಕ್ ಕಾನಕ್ಕೋಡ್ ವಂದಿಸಿದರು.SDPI ಕಾರ್ಯಕರ್ತರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





m
