Featured, ಇತರೆ, ಸ್ಥಳೀಯ

ಬಂಟ್ವಾಳ : ಜೂನ್ 24 ರಂದು ಜಮೀಯ್ಯತುಲ್ ಫಲಾಹ್ ಹಾಗೂ ಸಂಯುಕ್ತ ಜಮಾಅತ್ ವತಿಯಿಂದ ಎಸ್.ಐ.ಆರ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್‌ನ ಸಂಯುಕ್ತ ಆಶ್ರಯದಲ್ಲಿ ಎಸ್‌ಐಆರ್ (SIR) ಕುರಿತು ಮಾಹಿತಿ ಕಾರ್ಯಾಗಾರವು ಜೂನ್ 24ರಂದು ಸಂಜೆ 4.00 ಗಂಟೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಮತದಾನವು ಪ್ರತಿಯೊಬ್ಬ ನಾಗರಿಕನ ಅತ್ಯಂತ ಶ್ರೇಷ್ಠ ಹಾಗೂ ಸಂವಿಧಾನಬದ್ಧ ಹಕ್ಕಾಗಿದೆ. ಈ ಹಕ್ಕನ್ನು ಸಂರಕ್ಷಿಸಿಕೊಳ್ಳಲು ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳು, ಗಣತಿ ನಮೂನೆ (Enumeration Form) ಭರ್ತಿ ಮಾಡುವ ವಿಧಾನ ಹಾಗೂ ಎಸ್‌ಐಆರ್‌ಗೆ ಸಂಬಂಧಿಸಿದ ವಿವಿಧ ಸಂಶಯಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದಲ್ಲಿ ಸಮಗ್ರ ಮಾಹಿತಿ ಮತ್ತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳುವಂತೆ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಹಾಗೂ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಮಹಮ್ಮದ್ ಹನೀಫ್ ಗೋಳ್ತಮಜಲು ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

m

Related Posts