Featured, ಇತರೆ, ಸ್ಥಳೀಯ

ತೃಣಮೂಲ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದು: ಮಮತಾ ಬ್ಯಾನರ್ಜಿ ವಜಾ ಎಂದು ಅತೃಪ್ತರ ಘೋಷಣೆ, ಅರೂಪ್ ರಾಯ್ ಹೊಸ ಅಧ್ಯಕ್ಷರಾಗಿ ಆಯ್ಕೆ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತವು ತೀವ್ರಗೊಂಡಿದ್ದು, ಅತೃಪ್ತ ಪಾಳಯವು ಪಕ್ಷದ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಘೋಷಿಸಿದೆ.

ಇದೇ ವೇಳೆ, ತಮ್ಮದೇ ಗುಂಪು ನಿಜವಾದ ತೃಣಮೂಲ ಕಾಂಗ್ರೆಸ್ ಎಂದು ಹೇಳಿಕೊಂಡು, ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ನಗರದ ನ್ಯೂ ಟೌನ್ ಪ್ರದೇಶದ ಪಂಚತಾರಾ ಹೋಟೆಲ್‌ನಲ್ಲಿ ಅತೃಪ್ತರ ತುರ್ತು ಸಭೆ ನಡೆಯಿತು. ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ರಿತಬ್ರತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಮತ್ತು ಕೌನ್ಸಿಲರ್‌ಗಳು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಸಭಾ ವೇದಿಕೆಯಿಂದ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ಚಿತ್ರಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು.
ಪಕ್ಷದ ನಿಯಮಾವಳಿಗಳ ಪ್ರಕಾರ ಪ್ರತಿ ಮೂರು ವರ್ಷಗಳಿಗೊಮ್ಮೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ಪುನರ್ ರಚನೆ ಮಾಡಬೇಕು. ಆದರೆ 2022ರ ಫೆಬ್ರವರಿಯಿಂದ ಈ ಪ್ರಕ್ರಿಯೆ ನಡೆದಿಲ್ಲದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಸಾಂವಿಧಾನಿಕ ಸಂಕಷ್ಟ ಉಂಟಾಗಿದೆ ಎಂದು ರಿತಬ್ರತಾ ಬ್ಯಾನರ್ಜಿ ಆರೋಪಿಸಿದರು.
ಈ ಬೆಳವಣಿಗೆಗಳ ಮಧ್ಯೆ, ಹೌರಾ ಸೆಂಟ್ರಲ್ ಕ್ಷೇತ್ರದ ಶಾಸಕ ಅರೂಪ್ ರಾಯ್ ಅವರನ್ನು ಧ್ವನಿಮತದ ಮೂಲಕ ಸರ್ವಾನುಮತದಿಂದ ಪಕ್ಷದ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
“ಪಕ್ಷದ ನಿಯಮಾವಳಿಗಳ ಅನ್ವಯವೇ ಈ ವಿಶೇಷ ಸಭೆಯನ್ನು ಕರೆದಿದ್ದೇವೆ. ಸಭೆಯಲ್ಲಿ ಕೈಗೊಂಡ ಎಲ್ಲಾ ನಿರ್ಣಯಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು. ಅಂತಿಮವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಆಯೋಗವೇ ನಿರ್ಧರಿಸಲಿದೆ. ಮಮತಾ ಬ್ಯಾನರ್ಜಿ ಬಯಸಿದರೆ, ನಮ್ಮ ಹೊಸ ಸಂಘಟನೆಯಲ್ಲಿ ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಬಹುದು,” ಎಂದು ರಿತಬ್ರತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
m

Related Posts