ಸುಳ್ಯ: ಸಮಸ್ತ ಕೇಂದ್ರ ಮುಶಾವರ ಸದಸ್ಯರು, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹಾಗೂ ಹಿರಿಯ ಧಾರ್ಮಿಕ ಮುಖಂಡರಾದ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ತಮ್ಮ ಇಡೀ ಜೀವನವನ್ನು ಧಾರ್ಮಿಕ ಶಿಕ್ಷಣದ ಪ್ರಸಾರ ಹಾಗೂ ಸಮಾಜಸೇವೆಗೆ ಸಮರ್ಪಿಸಿದ್ದ ಅವರು, ಜಿಲ್ಲೆಯ ಅನೇಕ ಜಮಾಅತ್‌ಗಳಿಗೆ ಖಾಝಿಯಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾವಿರಾರು ಜನರಿಗೆ ಧಾರ್ಮಿಕ ಮತ್ತು ಸಾಮಾಜಿಕ ಮಾರ್ಗದರ್ಶನ ನೀಡುವ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ. ಅವರ ಸರಳ ವ್ಯಕ್ತಿತ್ವ, ಪಾಂಡಿತ್ಯ ಹಾಗೂ ಸಮಾಜಮುಖಿ ಸೇವೆಗಳು ಸದಾ ಸ್ಮರಣೀಯವಾಗಿರಲಿವೆ ಎಂದು ಸಂತಾಪ ಸೂಚನೆಯಲ್ಲಿ ತಿಳಿಸಲಾಗಿದೆ.
ಅವರ ಅಗಲಿಕೆ ಸಮಸ್ತ ಸಮಾಜಕ್ಕೆ ಹಾಗೂ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದ್ದು, ಅಲ್ಲಾಹನು ಅವರಿಗೆ ಉನ್ನತ ಸ್ಥಾನಮಾನವನ್ನು ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ





m
