ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆ ಅಡಿಕೆ ವರ್ತಕರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘ (ರಿ.) ಇದರ ಸಭೆಯು ಜೂನ್ 23ರಂದು ಮಂಗಳೂರಿನ ಗುಜರಾತಿ ಶಾಲಾ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಪ್ರಸ್ತುತ ಅಡಿಕೆ ವ್ಯಾಪಾರ ಕ್ಷೇತ್ರದ ಪರಿಸ್ಥಿತಿ, ಅಡಿಕೆ ಬೆಳೆಗಾರರು ಹಾಗೂ ವರ್ತಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ಮತ್ತು ಸಮಾಲೋಚನೆ ನಡೆಸಲಾಯಿತು.
ಕರ್ನಾಟಕದಿಂದ ವಿವಿಧ ರಾಜ್ಯಗಳಿಗೆ ಸಾಗಾಟವಾಗುತ್ತಿರುವ ಅಡಿಕೆ ತುಂಬಿದ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಅಧಿಕಾರಿಗಳು ಅಕ್ರಮವಾಗಿ ತಡೆಹಿಡಿಯುತ್ತಿರುವ ಕ್ರಮದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ವರ್ತಕರು ಹಾಗೂ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಕಾನೂನು ಹೋರಾಟ ಕೈಗೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಲ್ಲದೆ, ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಡಿಕೆ ಸೇರಿದಂತೆ ಕೃಷಿ ಉತ್ಪನ್ನಗಳನ್ನು ನಿರಂತರವಾಗಿ ಖರೀದಿಸಿ ಮಾರುಕಟ್ಟೆ ವ್ಯವಸ್ಥೆಯನ್ನು ಬಲಪಡಿಸುವಂತೆ ಎಲ್ಲಾ ವರ್ತಕರಿಗೆ ಸಭೆಯಲ್ಲಿ ಸೂಚಿಸಲಾಯಿತು

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಅಡಿಕೆ ವರ್ತಕರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘದ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ತೇಜಸ್ವಿ ರಾಜ್, ಜಿಲ್ಲಾ ಖಜಾಂಚಿ ಸಲೀಂ ಪೆರಿಂಗೋಡಿ, ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಕೋಕೋ ಹಾಗೂ ವಿವಿಧ ತಾಲೂಕುಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




m
