ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಭಾಗಿ
ಸುಳ್ಯ, ಜೂನ್ 27: ಸುಳ್ಯ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕ ಜನಸಂಪರ್ಕ ಸಭೆಯು ಜೂನ್ 28ರಂದು (ಭಾನುವಾರ) ಸಂಜೆ 4 ಗಂಟೆಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಅವರು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳು, ಸಮಸ್ಯೆಗಳು ಹಾಗೂ ಸಲಹೆಗಳನ್ನು ಆಲಿಸಲಿದ್ದಾರೆ.
ಸಾರ್ವಜನಿಕರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸುಳ್ಯ ಪೊಲೀಸ್ ಠಾಣೆಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.




m
