Featured, ಇತರೆ, ಸ್ಥಳೀಯ

ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೆ ಮಾದರಿ: ಟಿ ಎಂ ಶಹೀದ್ ತೆಕ್ಕಿಲ್

ಮಂಗಳೂರು:  ಅಭಿವೃದ್ಧಿ ಮತ್ತು ಜನಸಾಮಾನ್ಯರ ಕ್ಷೇಮದ ಬಗ್ಗೆ ಕೆಂಪೇಗೌಡರ ಚಿಂತನೆ ಮತ್ತು ಕಾಳಜಿ ಇಂದಿನ ಆಡಳಿತಗಾರರಿಗೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದ್ದಾರೆ.

ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ದ.ಕ ಕನ್ನಡ ಜಿಲ್ಲಾ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಬಲ್ಮಠ, ದ.ಕ ಜಿಲ್ಲಾ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಹಾಗೂ ಒಕ್ಕಲಿಗರ ಯಾನೆ ಗೌಡರ ಸೇವಾಸಂಘ ಮಂಗಳೂರಿನ ಸಹಕಾರದೊಂದಿಗೆ  ಬಲ್ಮಠ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ಯುವ ಪೀಳಿಗೆಯು ಅವರ ಬಗ್ಗೆ ತಿಳಿಯುವುದು ಅತ್ಯಗತ್ಯವಾಗಿದೆ. ಬೆಂಗಳೂರಿನ ನಿರ್ಮಾತರಾದ ಅವರು, ಹಿಂದಿನ ಕಾಲದಲ್ಲಿ ಅವರು ಯೋಚಿಸಿದ ರೀತಿಯು ಸೃಜನಶೀಲ ಹಾಗೂ ದೂರದೃಷ್ಟಿಯುಳ್ಳದ್ದಾಗಿದೆ. ಅವರ ದೂರದೃಷ್ಟಿಯನ್ನು ಅಳವಡಿಸಿಕೊಂಡರೆ ನಾಡಿನ ಅಭಿವೃದ್ದಿಯಾಗಲಿದೆ ಎಂದರು.ಬೆಂಗಳೂರು ಇಂದು ಸರ್ವ ಧರ್ಮದ ಶಾಂತಿಯ ತೋಟವಾಗಲು ದೇಶದ ಎಲ್ಲಾ ವಿಧದ ಜನರು ಮತ್ತು ಸಂಸ್ಕೃತಿಯನ್ನು ಒಳಗೊಂಡು ದೇಶದ ಮೂಲೆ ಮೂಲೆಯ ಜನರೊಂದಿಗೆ ವಿಶ್ವದ ನೂರಾರು ರಾಷ್ಟ್ರದ ಜನ ವಾಸಿಸುತಿರುವ ನಗರವಾಗಿದ್ದು ಪ್ರಪಂಚದಲ್ಲಿ ಬೆಂಗಳೂರು ಪ್ರಸಿದ್ಧವಾಗಿರಲು ಕೆಂಪೆ ಗೌಡರ ದೂರದೃಷಿ ಕಾರಣ ಮಾರುಕಟ್ಟೆ ನಿರ್ಮಿಸಿ ವ್ಯಾಪಾರಕ್ಕೆ ಕೆರೆ ನಿರ್ಮಿಸಿ ನೀರಿನ ವ್ಯವಸ್ಥೆ ಮರ ನಡಿಸಿ ಉದ್ಯಾನವನ ಕೆಂಪೆ ಗೌಡರ ಐವತ್ತೊಂಬತ್ತು ವರ್ಷದ ಅಮೋಘ ಸಾಧನೆ ಎಂದರು

ವಿಶ್ವವಿದ್ಯಾನಿಲಯ ಕಾಲೇಜಿನ ನಿಕಟಪೂರ್ವ ಪ್ರಿನ್ಸಿಪಾಲ್ ಡಾ. ಗಣಪತಿ ಗೌಡ ನಾಡಪ್ರಭು ಕೆಂಪೇಗೌಡರವರ ಬಗ್ಗೆ ಉಪನ್ಯಾಸ ನೀಡುತ್ತಾ, ಬಹು ಆಯಾಮವನ್ನು ಹೊಂದಿರುವ ಸೃಜನಶೀಲ ವ್ಯಕ್ತಿಯಾಗಿದ್ದ ಕೆಂಪೇಗೌಡ, ಬೆಂಗಳೂರನ್ನು ನಿರ್ಮಿಸಲು ಬಹಳಷ್ಟು ಶ್ರಮಪಟ್ಟಿದ್ದಾರೆ. ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ಅವರು ಕನ್ನಡ ನಾಡಿನ ಅಸ್ಮಿತೆಯಾಗಿದ್ದಾರೆ. ಎಲ್ಲಾ ಧರ್ಮಗಳ ಬೆಳವಣಿಗೆಗೆ ಶ್ರಮಿಸಿ, ಚಿಂತನೆಯನ್ನು ಬೆಳೆಸಿಕೊಂಡವರಾಗಿದ್ದಾರೆ ಎಂದು ಹೇಳಿದರು.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು.
ಕೆಂಪೇಗೌಡ ಜಯಂತಿಯ ಅಂಗವಾಗಿ ಕಾಲೇಜಿನಲ್ಲಿ ನಾನಾ ಸ್ಪರ್ಧೆಗಳನ್ನು ನಡೆಸಲಾಗಿದ್ದು, ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಲ್ಲಾಳ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಕೆ.ಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ದ.ಕ ಜಿಲ್ಲಾ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ., ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಬಲ್ಮಠದ ಪ್ರಿನ್ಸಿಪಾಲ್ ವನಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ ಜಿ. ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ವಸುಧಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕಾಲೇಜಿನ ಇತಿಹಾಸ ಪ್ರಾದ್ಯಾಪ್ಕಕ ಸಂತೋಷ್ ವಂದಿಸಿದರು. ಕನ್ನಡ ಉಪನ್ಯಾಸಕಿ ಯಶೋಧ ಕೆ. ಕಾರ್ಯಕ್ರಮ ನಿರೂಪಿಸಿದರು.

m

Related Posts