ಸುಳ್ಯ: ಅರಂತೊಡು ಸಮೀಪ ಜೀಪ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ನಿಖರ ಕಾರಣ ಹಾಗೂ ಗಾಯಗೊಂಡವರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.




m
