ಸುಳ್ಯ: ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಫರೀದ್ ಅವರು ಜುಲೈ 6ರಂದು ಪ್ರಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿನಂದನಾ ಸಮಿತಿಯ ವತಿಯಿಂದ ಆಯೋಜಿಸಿರುವ ಸಾರ್ವಜನಿಕ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಕು. ಮಂಜುಳಾ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಳ್ಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಎಲ್ಲಾ ಧರ್ಮಗಳ ಧಾರ್ಮಿಕ ಮುಖಂಡರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆಯಲಿರುವ ಈ ಸಮಾರಂಭವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಭರತ್ ಮುಂಡೋಡಿ, ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ, ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ. ಜಯರಾಮ್, ಕೆಪೆಕ್‌ನ ಮಾಜಿ ನಿರ್ದೇಶಕ ಪಿ.ಎ. ಮಹಮ್ಮದ್, ಆರಂತೋಡು ಎನ್‌ಎಂಪಿಯು ಸಂಚಾಲಕ ಎ.ಸಿ. ವಸಂತ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ತೀರ್ಥರಾಮ ಆಡ್ಕಬಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.





m
