Featured, ಇತರೆ, ಸ್ಥಳೀಯ

ಸುಳ್ಯದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ಖಾಸಗಿ ಆಂಬುಲೆನ್ಸ್ ಚಾಲಕ-ಮಾಲಕರ ಸಂಘದಿಂದ ಮನವಿ

ಸುಳ್ಯ, ಜು. 6: ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಇಂದು ಸುಳ್ಯದಲ್ಲಿ ನಡೆದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮವನ್ನು ಮುಗಿಸಿ ಹಿಂದಿರುಗುವ ವೇಳೆ, ಸುಳ್ಯದ ಖಾಸಗಿ ಆಂಬುಲೆನ್ಸ್ ನಿಲ್ದಾಣದ ಶೆಡ್‌ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಅದೇ ವೇಳೆ, ತುರ್ತು ಪರಿಸ್ಥಿತಿಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯದ ಖಾಸಗಿ ಆಂಬುಲೆನ್ಸ್ ಚಾಲಕರಿಗೆ ಸರ್ಕಾರದ ವತಿಯಿಂದ ವಿಶೇಷ ಸೌಲಭ್ಯಗಳು ಹಾಗೂ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಶಿವಪ್ರಸಾದ್, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿಎಮ್‌ಎ, ತಾಜುದ್ದೀನ್ ಟರ್ಲಿ, ರಫೀಕ್ ಲೈಫ್ ಕೇರ್, ಹಮೀದ್ ಬೆಳ್ಳಾರೆ, ಮಿಥುನ್, ಹನೀಫ್ ಕೆವಿಜಿ, ಸಂದೇಶ್, ಸಿದ್ದೀಕ್ ಜಟ್ಟಿಪಳ್ಳ, ಸಮೀರ್ ಕಾಣಿಯೂರು, ಪೃಥ್ವಿರಾಜ್ ಬೆಳ್ಳಾರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

m

Related Posts