Featured, ಅಂಕಣ, ಸ್ಥಳೀಯ

ಆಲೆಟ್ಟಿ-ಅರಂಬೂರು-ಮಾಂಬ್ಲಿ ರಸ್ತೆ ದುರಸ್ತಿ ಕಾಂಕ್ರೀಟೀಕರಣಕ್ಕೆ ಆಗ್ರಹಿಸಿ ಎಸ್‌ಡಿಪಿಐ ನಿಂದ ಗ್ರಾಮೀಣಾಭಿವೃದ್ಧಿ ನಿರ್ದೇಶಕರಿಗೆ ಮನವಿ

ಸುಳ್ಯ: ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಂಬೂರು – ಮಾಂಬ್ಲಿ ರಸ್ತೆಯು ಅತ್ಯಂತ ಹದಗೆಟ್ಟಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಮತ್ತು ಶಾಲಾ ಮಕ್ಕಳು ತೀವ್ರ ಪರದಾಡುವಂತಾಗಿದೆ. ರಸ್ತೆಯ ದುಸ್ಥಿತಿಯಿಂದಾಗಿ ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ರಸ್ತೆಯು ಸುಮಾರು 40ಕ್ಕೂ ಹೆಚ್ಚು ಕುಟುಂಬಗಳ ಸಂಪರ್ಕ ಕೊಂಡಿಯಾಗಿದೆ. ಮಳೆಗಾಲದಲ್ಲಿ ರಸ್ತೆಯು ಸಂಪೂರ್ಣ ಕೆಸರುಮಯವಾಗಿ ವಾಹನಗಳ ಸಂಚಾರ ಕಷ್ಟಕರವಾಗಿದ್ದರೆ, ಬೇಸಿಗೆಯಲ್ಲಿ ಅತಿಯಾದ ಧೂಳಿನ ಸಮಸ್ಯೆಯಿಂದಾಗಿ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಗಳಿಂದಾಗಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಸವಾರರು ಪ್ರತಿನಿತ್ಯ ಅಪಘಾತದ ಭೀತಿಯಲ್ಲೇ ಸಂಚರಿಸುತ್ತಿದ್ದಾರೆ. ಹಾಗಾಗಿ ಈ ರಸ್ತೆಯನ್ನು ಕೂಡಲೇ ಪರಿಶೀಲಿಸಿ, ತುರ್ತಾಗಿ ಕಾಂಕ್ರೀಟೀಕರಣ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮೀರಝ್ ಸುಳ್ಯ ರವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

Related Posts