ಸುಳ್ಯ: ಅರಂತೋಡು ಸಮೀಪದ ಬಿಳಿಯಾರು ಪ್ರದೇಶದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




m
