ಇತರೆ, ಸ್ಥಳೀಯ

ಭಾರೀ ಮಳೆಯ ಮುನ್ಸೂಚನೆ: ಜು.18ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – ಡಿಸಿ ದರ್ಶನ್ ಎಚ್‌.ವಿ. ಆದೇಶ

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 18ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಪೋಷಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಹಾಗೂ ಅನಗತ್ಯವಾಗಿ ನೀರು ಹರಿಯುವ ಪ್ರದೇಶಗಳು, ನದಿ ತೀರಗಳು ಮತ್ತು ಅಪಾಯದ ಸ್ಥಳಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
m

Related Posts