Featured, ಇತರೆ, ಸ್ಥಳೀಯ

ಸಂಪಾಜೆ : ಕಲ್ಲುಗುಂಡಿ ವಿವಾಹಿತೆಯ ಸಾವು ಅನುಮಾನಾಸ್ಪದ ? : ವಿಧಿವಿಜ್ಞಾನ ಪರೀಕ್ಷೆ ಮಂಗಳೂರಿಗೆ ಮೃತದೇಹ‌ ರವಾನೆ

ಸಂಪಾಜೆ, ಜು.18: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗುಂಡಿ ಕಡಪಾಲದಲ್ಲಿ ನಡೆದಿರುವ ವಿವಾಹಿತೆಯ ಅನುಮಾನಾಸ್ಪದ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮೃತೆಯ ಕುಟುಂಬಸ್ಥರು ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ವಿಧಿವಿಜ್ಞಾನ (Forensic) ಪರೀಕ್ಷೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೃತರನ್ನು ಮೂಲತಃ ದೇವರಕೊಲ್ಲಿ ನಿವಾಸಿಯಾಗಿದ್ದು, ಪ್ರಸ್ತುತ ಕಲ್ಲುಗುಂಡಿ ಕಡಪಾಲ ಸಮೀಪ ವಾಸವಾಗಿದ್ದ ಅಲವಿ ಕುಟ್ಟಿ ಅವರ ಪುತ್ರ ಅನ್ಸಾರ್ ಅವರ ಪತ್ನಿ ಫಾತಿಮತ್ ಇಶಾನಾ ಎಂದು ಗುರುತಿಸಲಾಗಿದೆ.
ಆರಂಭಿಕ ಮಾಹಿತಿ ಪ್ರಕಾರ, ಫಾತಿಮತ್ ಇಶಾನಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದರೂ, ಘಟನೆಯ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಮೃತೆಯ ಕುಟುಂಬಸ್ಥರು ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಸುಳ್ಯದ ಕೆವಿಜಿ ಆಸ್ಪತ್ರೆಯಿಂದ ಮಂಗಳೂರಿನ ಕಣಚೂರು ಆಸ್ಪತ್ರೆಗೆ ವಿಧಿವಿಜ್ಞಾನ (ಫರೆನ್ಸಿಕ್) ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.
ಮರಣದ ನಿಖರ ಕಾರಣ ಹಾಗೂ ಪ್ರಕರಣದ ಸತ್ಯಾಸತ್ಯತೆ ವಿಧಿವಿಜ್ಞಾನ ಪರೀಕ್ಷೆಯ ವರದಿ ಬಂದ ಬಳಿಕವೇ ಸ್ಪಷ್ಟವಾಗುವ ಸಾಧ್ಯತೆ ಇದೆ. ಈ ಸಂಬಂಧ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
m

Related Posts