Featured

ಸುಳ್ಯ: ಅರಂತೋಡು ಕೂಲ್ಚಾಲ್ ಬಳಿ ಬೈಕ್–ಸ್ವಿಫ್ಟ್ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸುಳ್ಯ, ಜು. 22: ಅರಂತೋಡು ಸಮೀಪದ ಕೂಲ್ಚಾಲ್ ಬಳಿ ಬೈಕ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಬಿಳಿಯಾರು ನಿವಾಸಿ ಸುಬ್ರಾಯ ಅವರ ಪುತ್ರ ಸಂತೋಷ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ನೀಡಿದ ಚಿಕಿತ್ಸೆಯ ನಡುವೆಯೂ ಸಂತೋಷ್ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಈ ದುರ್ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

m