ಸುಳ್ಯ, ಜು. 23: ಕಲ್ಲುಗುಂಡಿಯ ಕಡೆಪಾಲದ ವಿವಾಹಿತ ಮಹಿಳೆ ಪಾತಿಮಾತ್ ನಿಶಾನ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಗುರುವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದ ತನಿಖೆಯ ವೇಳೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬ ಶಂಕೆಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದರು. ಈ ಸಂಬಂಧ ಮೃತ ಮಹಿಳೆಯ ಮಾವ ಸಿ.ಪಿ. ಅಲವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಅವರನ್ನು ಕೊಲೆ ಪ್ರಕರಣದ ವಿವಿಧ ಸೆಕ್ಷನ್‌ಗಳಡಿ ಬಂಧಿಸಲಾಗಿತ್ತು.
ಬಂಧಿತ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಸುಳ್ಯ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





m
