ಮಂಗಳೂರು, ಜು.24: ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜು.25 (ಶನಿವಾರ)ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.




m
