Featured, ಅಂಕಣ, ಸ್ಥಳೀಯ

ಕಲ್ಲುಗುಂಡಿ ವಿವಾಹಿತೆಯ ಅಸಹಜ ಸಾವು ಪ್ರಕರಣ: ಸಮಗ್ರ ಹಾಗೂ ಪಾರದರ್ಶಕ ತನಿಖೆಗೆ ಮುಹ್ಯದ್ದೀನ್ ಜುಮಾ ಮಸೀದಿ ಸಮಿತಿಯ ಆಗ್ರಹ

ಕಲ್ಲುಗುಂಡಿ, ಜು.25: ಕಲ್ಲುಗುಂಡಿ ಪ್ರದೇಶದಲ್ಲಿ ಸಂಭವಿಸಿದ ವಿವಾಹಿತ ಮಹಿಳೆಯ ಅಸಹಜ ಸಾವಿನ ಘಟನೆಗೆ ಮುಹ್ಯದ್ದೀನ್ ಜುಮಾ ಮಸೀದಿ ಸಮಿತಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ಕುರಿತು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದೆ.

ಈ ಕುರಿತು ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಈ ದುರ್ಘಟನೆ ಅತ್ಯಂತ ದುಃಖಕರ ಹಾಗೂ ಮಾನವೀಯತೆಯನ್ನು ನೋಯಿಸುವ ಘಟನೆಯಾಗಿದ್ದು, ಮೃತರ ಕುಟುಂಬಕ್ಕೆ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ಅಲ್ಲಾಹನು ಸಹನೆ, ಧೈರ್ಯ ಮತ್ತು ಸಾಂತ್ವನವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯ ಒತ್ತಡ, ಪಕ್ಷಪಾತ ಅಥವಾ ಪ್ರಭಾವಕ್ಕೆ ಅವಕಾಶ ನೀಡದೆ, ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ, ಘಟನೆಯ ಸತ್ಯಾಸತ್ಯತೆಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ಒತ್ತಾಯಿಸಿದೆ.

ಈ ಕುರಿತು ಮುಹ್ಯದ್ದೀನ್ ಜುಮಾ ಮಸೀದಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಹಿ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

m

Related Posts