ಇತರೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಮಂಗಳೂರು, ಆ. 6: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಬಂಧನದೊಂದಿಗೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿರುವ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ಈ ಹಿಂದೆ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದ್ದು, ಆತನ ಬಂಧನಕ್ಕೆ ₹4 ಲಕ್ಷ ಬಹುಮಾನವನ್ನು ಸಹ ಘೋಷಿಸಲಾಗಿತ್ತು.

ಬಂಧಿತರಿಂದ ಲಭಿಸಿದ ಮಾಹಿತಿ ಆಧರಿಸಿ ಕಾರ್ಯಾಚರಣೆ

ಕಳೆದ ಜುಲೈ 11ರಂದು ಎನ್‌ಐಎ ಅಧಿಕಾರಿಗಳು ನೌಷಾದ್ ಹಾಗೂ ನಸೀರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆಯ ವೇಳೆ ಅವರು ಕೊಚ್ಚಿಯಲ್ಲಿರುವ ಅಜ್ಞಾತ ತಾಣದ ಕುರಿತು ಮಹತ್ವದ ಮಾಹಿತಿ ನೀಡಿದ್ದರೆಂದು ತಿಳಿದುಬಂದಿದೆ. ಈ ಸುಳಿವಿನ ಆಧಾರದ ಮೇಲೆ ಎನ್‌ಐಎ ವಿಶೇಷ ಕಾರ್ಯಾಚರಣೆ ನಡೆಸಿ ಉಮ್ಮರ್ ಫಾರೂಕ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಎನ್‌ಐಎ ಶೋಧ ಕಾರ್ಯವನ್ನು ಮುಂದುವರಿಸಿದೆ ಎಂದು ಮೂಲಗಳು ತಿಳಿಸಿವೆ.

m

Related Posts