ಸಂಪಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (RMSA) ಸಂಪಾಜೆಯ 6ನೇ ತರಗತಿಯ ವಿದ್ಯಾರ್ಥಿನಿ ಯಶ್ವಿಕ, ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದುಕೊಂಡಿದ್ದಾಳೆ.

ಎಲಿಮಲೆಯಲ್ಲಿ ನಿನ್ನೆ ನಡೆದ 14ರ ವಯೋಮಾನದ ಬಾಲಕಿಯರ ವಿಭಾಗದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಯಶ್ವಿಕ್, ಅತ್ಯುತ್ತಮ ಆಟ ಪ್ರದರ್ಶಿಸಿ 3ನೇ ಸ್ಥಾನ ಪಡೆಯುವುದರ ಮೂಲಕ ಶಾಲೆ ಹಾಗೂ ಊರಿಗೆ ಕೀರ್ತಿ ತಂದಿದ್ದಾಳೆ.
ಯಶ್ವಿಕ್ ಅವರ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC), ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.




m
