Featured, ಅಂಕಣ, ಸ್ಥಳೀಯ

ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಿತಿನ್ ಡೆಮ್ಮಲೆ ಆಯ್ಕೆ

ಸಂಪಾಜೆ: ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ ಅವರ ಆದೇಶದ ಮೇರೆಗೆ, ಸಂಪಾಜೆಯ ರಿತಿನ್ ಡೆಮ್ಮಲೆ ಅವರನ್ನು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರಿತಿನ್ ಡೆಮ್ಮಲೆ ಅವರು ಮೂಲತಃ ಕೊಡಗು ಜಿಲ್ಲೆಯ ಸಂಪಾಜೆ ನಿವಾಸಿಯಾಗಿದ್ದು, ಸಂಪಾಜೆ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಚೆಸ್ಕಾಂ ನಿರ್ದೇಶಕರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಿತಿನ್ ಡೆಮ್ಮಲೆ ಅವರ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

m

Related Posts