ಸಂಪಾಜೆ: ಮಸ್ಜಿದುಲ್ ಇಸ್ಲಾಹ್ ಹಾಗೂ ಮದ್ರಸತುಲ್ ಇಸ್ಲಾಹ್, ಸಂಪಾಜೆ ಇದರ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7:30ಕ್ಕೆ ಇಬ್ರಾಹಿಂ ಮಾಸ್ಟರ್, ಸಂಪಾಜೆ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂದೇಶ ಭಾಷಣ ಮಾಡಿದ ಖತೀಬ್ ಶಮೀರ್ ಮೌಲವಿ, ಸುಂಟಿಕೊಪ್ಪ, “ಸ್ವಾತಂತ್ರ್ಯವು ನಮ್ಮ ಹಕ್ಕು ಮಾತ್ರವಲ್ಲ, ನಮ್ಮ ಜವಾಬ್ದಾರಿಯೂ ಆಗಿದೆ. ದೇಶದ ಏಕತೆ ಮತ್ತು ಶಾಂತಿಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇಸ್ಲಾಮಿನ ನ್ಯಾಯ, ಸಹೋದರತ್ವ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಎತ್ತಿಹಿಡಿದು ದೇಶದ ಪ್ರಗತಿಗಾಗಿ ಎಲ್ಲರೂ ಶ್ರಮಿಸಬೇಕು” ಎಂದು ಕರೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶದ ಸ್ವಾತಂತ್ರ್ಯ, ಏಕತೆ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ ಉಬೈಸ್, ಸಂಪಾಜೆ ಅವರು ವಂದನಾರ್ಪಣೆ ನೆರವೇರಿಸಿದರು.





m
