Featured, ಅಂಕಣ, ಸ್ಥಳೀಯ

ಸಂಪಾಜೆ ಬದ್ರ್ ಜುಮಾ ಮಸೀದಿಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ

ದ್ವೇಷವಲ್ಲ, ಸಹೋದರತ್ವ ಭಾರತ ಬೆಳೆಸೋಣ: ಲುಖ್ಮಾನ್ ಫೈಝಿ ಅಲ್ ಮಅ್‌ಬರಿ ಸಂಪಾಜೆ

ಸಂಪಾಜೆ: ಸಂಪಾಜೆ ಬದ್ರ್ ಜುಮಾ ಮಸೀದಿಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಮದ್ರಸ ಮುಅಲ್ಲಿಂ ಆರಿಫ್ ಫೈಝಿ ಅಲ್ ಮಅ್‌ಬರಿ ದುಆ ನೆರವೇರಿಸಿದರು. ಜಮಾಅತ್ ಸಮಿತಿ ಅಧ್ಯಕ್ಷ ಜನಾಬ್ ಮುಹಮ್ಮದ್ ಹಮೀದಿಯಾ ಧ್ವಜಾರೋಹಣ ನೆರವೇರಿಸಿದರು.

ಸ್ಥಳೀಯ ಖತೀಬ್ ಲುಖ್ಮಾನುಲ್ ಹಕೀಂ ಫೈಝಿ ಅಲ್ ಮಅ್‌ಬರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ನ್ಯಾಯ, ಸಮಾನತೆ ಮತ್ತು ಸಹೋದರತ್ವದ ಮಹತ್ವವನ್ನು ವಿವರಿಸಿದರು. ದೇಶದ ವೈವಿಧ್ಯತೆಯನ್ನು ಗೌರವಿಸುವುದು ಮತ್ತು ಪರಸ್ಪರ ಪ್ರೀತಿ, ಸಹಬಾಳ್ವೆ ಹಾಗೂ ಶಾಂತಿಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಅವರು ತಮ್ಮ ಪ್ರಮೇಯ ಭಾಷಣದಲ್ಲಿ ಕರೆ ನೀಡಿದರು.

ಜಮಾಅತ್ ಅಧ್ಯಕ್ಷ ಜನಾಬ್ ಮುಹಮ್ಮದ್ ಹಮೀದಿಯಾ ಮಾತನಾಡಿ, ಸ್ವಾತಂತ್ರ್ಯದ ನಿಜವಾದ ಅರ್ಥವು ಪ್ರತಿಯೊಬ್ಬ ನಾಗರಿಕನು ಪರಸ್ಪರ ಗೌರವ, ಶಾಂತಿ ಮತ್ತು ಸಹೋದರತ್ವದಿಂದ ಬದುಕುವುದರಲ್ಲಿ ಅಡಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮದ್ರಸ ವಿದ್ಯಾರ್ಥಿಗಳಾದ ತಾಜುದ್ದೀನ್, ಸಿನಾನ್ ಮತ್ತು ನಿಹಾದ್ ದೇಶಪ್ರೇಮದ ಕನ್ನಡ ಹಾಡುಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಅಬ್ದುಲ್ ಖಾದರ್ ಎಸ್.ಪಿ., ಸ್ವಲಾತ್ ಕಮಿಟಿ ಅಧ್ಯಕ್ಷ ಅಬ್ದುಲ್ ಖಾದರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಿ.ಪಿ., ಜಮಾಅತ್ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಮಾಅತ್ ಸದಸ್ಯ ಮುಹಮ್ಮದ್ ಹನೀಫ್ ಎಸ್.ಕೆ. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

Related Posts