Featured, ಅಂಕಣ, ಇತರೆ, ಸ್ಥಳೀಯ

ಸುಳ್ಯದಲ್ಲಿ SDPI ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯದ ಗಾಂಧಿನಗರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅಡ್ವೊಕೇಟ್ ರಶೀದ್ ನೀಡಿದರು.

 ಸ್ವಾಗತವನ್ನು SDPI ಸುಳ್ಯ ಬ್ಲಾಕ್ ಸಮಿತಿ ಕಾರ್ಯದರ್ಶಿ ಸುಹೈಲ್ ಸುಳ್ಯ ನೆರವೇರಿಸಿದರು. SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಸಿದ್ದೀಕ್ ಕೊಡಿಯಮ್ಮೆ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಕಲಂದರ್ ಅರಂಬೂರು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Posts