ಇತರೆ

ಸುಳ್ಯದಲ್ಲಿ WIM ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯದ ಮಹತ್ವ, ಪ್ರಜಾಪ್ರಭುತ್ವ–ಸಂವಿಧಾನಿಕ ಮೌಲ್ಯಗಳ ಸಂರಕ್ಷಣೆಗೆ ಕರೆ

ಸುಳ್ಯ: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಸುಳ್ಯ ಬ್ರಾಂಚ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು WIM ಸುಳ್ಯ ಬ್ರಾಂಚ್ ಅಧ್ಯಕ್ಷೆ ನಸೀಬಾ ವಹಿಸಿದ್ದರು. ಅರಂಬೂರು–ಸಂಪಾಜೆ ಬ್ರಾಂಚ್ ಅಧ್ಯಕ್ಷೆ ತಾಹಿರಾ ಪೆರಾಜೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದ ಸ್ವಾಗತವನ್ನು WIM ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಸನಾ ನೆರವೇರಿಸಿದರು. ಸ್ವಾತಂತ್ರ್ಯದ ಮಹತ್ವ ಹಾಗೂ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಜವಾಬ್ದಾರಿಯ ಕುರಿತು ಕಾರ್ಯಕ್ರಮದಲ್ಲಿ ಸಂದೇಶ ನೀಡಲಾಯಿತು.

ಕೊನೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಜಮೀಲಾ ಅರಂಬೂರು ಧನ್ಯವಾದ ಸಲ್ಲಿಸಿದರು. WIM ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುಳ್ಯದಲ್ಲಿ WIM ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಸುಳ್ಯ ಬ್ರಾಂಚ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು WIM ಸುಳ್ಯ ಬ್ರಾಂಚ್ ಅಧ್ಯಕ್ಷೆ ನಸೀಬಾ ವಹಿಸಿದ್ದರು. ಅರಂಬೂರು–ಸಂಪಾಜೆ ಬ್ರಾಂಚ್ ಅಧ್ಯಕ್ಷೆ ತಾಹಿರಾ ಪೆರಾಜೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಸಂದೇಶ ಭಾಷಣ ಮಾಡಿದರು.
WIM ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಸನಾ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯದ ಮಹತ್ವ, ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ಸಂದೇಶ ನೀಡಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಜಮೀಲಾ ಅರಂಬೂರು ಅವರು ಆಗಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ WIM ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
m