ಈಶ್ವರಮಂಗಲ: ತ್ವೈಬಾ ಎಜುಕೇಶನ್ ಸೆಂಟರ್ ಈಶ್ವರಮಂಗಲದಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಸಂದೇಶದೊಂದಿಗೆ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಉಮರಾ ನಾಯಕರಾದ ಆದಂ ಈಶ್ವರಮಂಗಲ ಸೇರಿದಂತೆ ಸಂಸ್ಥೆಯ ಉಸ್ತಾದರುಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ದೇಶಪ್ರೇಮ, ರಾಷ್ಟ್ರಭಕ್ತಿ ಹಾಗೂ ಸ್ವಾತಂತ್ರ್ಯದ ಮಹತ್ವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.
![]()